Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:12 - ಕನ್ನಡ ಸತ್ಯವೇದವು C.L. Bible (BSI)

12 ಬಳಿಕ ಆ ಮನುಷ್ಯರಿಬ್ಬರು ಲೋಟನಿಗೆ, “ನಿನಗೆ ಇಲ್ಲಿ ಯಾರು ಯಾರು ಇದ್ದಾರೆಯೋ, ಗಂಡುಹೆಣ್ಣು ಮಕ್ಕಳು, ಅಳಿಯಂದಿರು ಹಾಗೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಆ ದೂತರು ಲೋಟನಿಗೆ - ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರಹೊರಕ್ಕೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ಈ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ಈ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ದೂತರಿಬ್ಬರು ಲೋಟನಿಗೆ, “ಇಲ್ಲಿ ನಿನಗೆ ಇನ್ನೂ ಯಾರಾದರೂ ಇದ್ದಾರೋ? ನಿನ್ನ ಅಳಿಯಂದಿರನ್ನೂ, ನಿನ್ನ ಪುತ್ರರನ್ನೂ, ಪುತ್ರಿಯರನ್ನೂ, ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಈ ಸ್ಥಳದಿಂದ ಹೊರಗೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:12
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.


ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.


ನನ್ನ ಜನರೇ, ಬಾಬಿಲೋನನ್ನು ಬಿಟ್ಟು ಹೊರಡಿ. ನನ್ನ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು