Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:13 - ಕನ್ನಡ ಸತ್ಯವೇದವು C.L. Bible (BSI)

13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ಈ ಸ್ಥಳವನ್ನು ನಾಶಮಾಡುವದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:13
21 ತಿಳಿವುಗಳ ಹೋಲಿಕೆ  

ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಬಳಿಕ ಆ ಮನುಷ್ಯರಿಬ್ಬರು ಲೋಟನಿಗೆ, “ನಿನಗೆ ಇಲ್ಲಿ ಯಾರು ಯಾರು ಇದ್ದಾರೆಯೋ, ಗಂಡುಹೆಣ್ಣು ಮಕ್ಕಳು, ಅಳಿಯಂದಿರು ಹಾಗೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ ಅವರು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ, ನಿಮ್ಮನ್ನು ಹಿಂದಟ್ಟಿ ಹಿಡಿದು, ಕಡೆಗೆ ನಾಶಮಾಡುವುವು.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು