Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:15 - ಕನ್ನಡ ಸತ್ಯವೇದವು C.L. Bible (BSI)

15 ಹೊತ್ತು ಮೂಡುವುದಕ್ಕೆ ಮುಂಚೆ ದೂತರು ಲೋಟನಿಗೆ, “ಏಳು, ನಿನ್ನ ಹೆಂಡತಿ ಮತ್ತು ಹೆಣ್ಣುಮಕ್ಕಳಿಬ್ಬರನ್ನು ಕರೆದುಕೊಂಡು ಬೇಗನೆ ಹೊರಡು; ಇಲ್ಲದಿದ್ದರೆ ಊರಿಗೆ ಬರಲಿರುವ ದಂಡನೆಯಲ್ಲಿ ನೀನೂ ಸಿಕ್ಕಿಕೊಂಡು ನಾಶವಾಗಬೇಕಾದೀತು,” ಎಂದು ಹೇಳಿ ತ್ವರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೊತ್ತು ಮೂಡುವದಕ್ಕೆ ಮುಂಚೆ ಆ ದೂತರು ಲೋಟನಿಗೆ - ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣು ಮಕ್ಕಳನ್ನೂ ಬೇಗ ಕರಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು ಎಂದು ಹೇಳಿ ತ್ವರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೂರ್ಯೋದಯಕ್ಕಿಂತ ಮೊದಲೇ ಹೊರಡುವಂತೆ ದೇವದೂತರು ಲೋಟನನ್ನು ಒತ್ತಾಯಿಸಿ, “ಈ ನಗರವನ್ನು ನಾಶಗೊಳಿಸಲಾಗುವುದು. ಆದ್ದರಿಂದ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಕರೆದುಕೊಂಡು ಈ ಸ್ಥಳದಿಂದ ಓಡಿಹೋಗು, ಆಗ ನೀನು ಈ ನಗರದೊಡನೆ ನಾಶವಾಗುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೂರ್ಯೋದಯವಾಗುವ ಮೊದಲು ದೂತರು ಲೋಟನನ್ನು ತ್ವರೆಪಡಿಸಿ, “ಈ ಪಟ್ಟಣಕ್ಕೆ ಉಂಟಾಗುವ ದಂಡನೆಯಿಂದ ನೀನು ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಪುತ್ರಿಯರನ್ನೂ ಕರೆದುಕೊಂಡು ನಡೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:15
11 ತಿಳಿವುಗಳ ಹೋಲಿಕೆ  

ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.


ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.


ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಅವನು ಇನ್ನೂ ತಡಮಾಡುತ್ತಿರುವುದನ್ನು ಕಂಡು, ಆ ಮನುಷ್ಯರು ಅವನನ್ನು ಹಾಗು ಅವನ ಹೆಂಡತಿ ಮಕ್ಕಳನ್ನು ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಸರ್ವೇಶ್ವರ ಸ್ವಾಮಿಗೆ ಅವನ ಮೇಲೆ ಅಷ್ಟು ಕನಿಕರವಿತ್ತು.


ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು