Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:2 - ಕನ್ನಡ ಸತ್ಯವೇದವು C.L. Bible (BSI)

2 ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸ್ವಾವಿುಗಳೇ, ನಿಮ್ಮ ದಾಸನ ಮನೆಗೆ ಬಂದು ಇಳುಕೊಂಡು ಕಾಲುಗಳನ್ನು ತೊಳಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡುಕೊಂಡು ಹೋಗಬಹುದು ಅಂದನು. ಅವರು - ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ಈ ರಾತ್ರಿ ನಮ್ಮ ಮನೆಯಲ್ಲೇ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ ನಾವು ಈ ರಾತ್ರಿ ಕಳೆಯುತ್ತೇವೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:2
15 ತಿಳಿವುಗಳ ಹೋಲಿಕೆ  

ನೀರು ತರಿಸಿಕೊಡುತ್ತೇನೆ, ಕಾಲುತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.


ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು.


ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ,


ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.


“ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದವನೇ, ಮನೆಗೆ ಬಾ; ಇಲ್ಲಿ ಹೊರಗೇಕೆ ನಿಂತಿರುವೆ? ನಿನಗೆ ಮನೆ ಸಿದ್ಧವಾಗಿದೆ; ಒಂಟೆಗಳಿಗೆ ಬೇಕಾದ ಸ್ಥಳವಿದೆ,” ಎಂದು ಕರೆದನು.


ಆಮೇಲೆ ಗೃಹನಿರ್ವಾಹಕನು ಅವರೆಲ್ಲರನ್ನು ಜೋಸೆಫನ ಮನೆಯೊಳಗೆ ಕರೆತಂದು ಕಾಲು ತೊಳೆದುಕೊಳ್ಳುವುದಕ್ಕೆ ನೀರನ್ನು ಕೊಡಿಸಿದನು. ಅವರ ಕತ್ತೆಗಳಿಗೆ ಮೇವು ಹಾಕಿಸಿದನು.


ತೆಗೆದುಹಾಕಿರುವೆನಲ್ಲಾ ನನ್ನ ಅಂಗಿಯನ್ನು ಮತ್ತೆ ಅದನು ಹಾಕಿಕೊಳ್ಳುವುದೆಂತು? ತೊಳೆದಿರುವೆನಲ್ಲಾ ನನ್ನ ಪಾದಗಳನು ಮತ್ತೆ ಅವುಗಳನ್ನು ಕೊಳೆಮಾಡಿಕೊಳ್ಳುವುದೆಂತು?


ಅನಂತರ ಅವನಿಗೆ, “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.


ಪರದೇಶೀಯರು ಹೊರಬೀದಿಯಲ್ಲಿ ತಂಗಬೇಕಾಗಿರಲಿಲ್ಲ ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿತ್ತಲ್ಲಾ.


ಪದೇ ಪದೇ ನೆರೆಯವನ ಮನೆಗೆ ಹೋಗಬೇಡ, ಬೇಸರಗೊಂಡು ನಿನ್ನನ್ನು ಹಗೆಮಾಡಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು