Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:22 - ಕನ್ನಡ ಸತ್ಯವೇದವು C.L. Bible (BSI)

22 ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಅಲ್ಲಿಗೆ ಮುಟ್ಟುವ ತನಕ ನಾನೇನೂ ಮಾಡುವದಕ್ಕಾಗುವದಿಲ್ಲ ಅಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:22
15 ತಿಳಿವುಗಳ ಹೋಲಿಕೆ  

ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಈಗ ಲವಣ ಸಮುದ್ರ ಎನಿಸಿಕೊಳ್ಳುವ ಸಿದ್ದೀಮ್ ತಗ್ಗುಪ್ರದೇಶದಲ್ಲಿ ಒಂದುಗೂಡಿದ್ದ ಸೊದೋಮಿನ ಅರಸ ಬೆರಗ, ಗೊಮೋರದ ಅರಸ ಬಿರ್ಶಗ, ಅದ್ಮಾಹದ ಅರಸ ಶಿನಾಬ, ಚೆಬೋಯಿಮನ ಅರಸ ಶೆಮೇಬರ, ಬೆಲಗಿನ (ಅಂದರೆ ಚೋಗರದ) ಅರಸ - ಈ ಐವರೊಡನೆ ಯುದ್ಧಮಾಡಿದರು.


ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.


ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.


ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.


ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.


ಹೆಷ್ಬೋನಿನ ಮತ್ತು ಎಲೆಯಾಲೆಯ ಜನರು ಅರಚಿಕೊಳ್ಳುತ್ತಿದ್ದಾರೆ. ಆ ಕೂಗು ಯಹಚಿನವರೆಗೆ ಕೇಳಿಸುತ್ತಿದೆ. ಚೋಯರಿನಿಂದ ಹೊರೊನಯಿಮಿನವರೆಗೆ ಮತ್ತು ಎಗ್ಲತ್ ಶೆಲೆಶೀಯದವರೆಗೆ ಆ ಕಿರಿಚಾಟ ಕೇಳಿಸುತ್ತಿದೆ. ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.


ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.


ಅದಕ್ಕಾತನು, “ಸರಿ, ಹಾಗೆಯೇ ಆಗಲಿ, ಈ ನಿನ್ನ ಕೋರಿಕೆಯನ್ನೂ ನೆರವೇರಿಸುತ್ತೇನೆ, ನೀನು ಹೇಳಿದ ಆ ಊರನ್ನು ಹಾಳುಮಾಡುವುದಿಲ್ಲ.


ಲೋಟನು ಚೋಗರನ್ನು ಮುಟ್ಟುವಷ್ಟರಲ್ಲಿ ಸೂರ್ಯೋದಯವಾಗಿತ್ತು.


ದಕ್ಷಿಣ ಪ್ರದೇಶ, ಚೋಗರೂರಿನ ತನಕ ಇದ್ದ ಜೆರಿಕೋ ಖರ್ಜೂರಗಳ ಪಟ್ಟಣದ ಸುತ್ತಲಿನ ಬಯಲು, ಇದನ್ನೆಲ್ಲಾ ಅವನಿಗೆ ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು