Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:24 - ಕನ್ನಡ ಸತ್ಯವೇದವು C.L. Bible (BSI)

24 ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:24
29 ತಿಳಿವುಗಳ ಹೋಲಿಕೆ  

ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !


ಅನ್ಯಜನರು ವಾಸಮಾಡುವರು ಅವನ ಗುಡಾರದೊಳಗೆ ಗಂಧಕವನ್ನು ಸುರಿಸಲಾಗುವುದು ಅವನ ಮನೆಯ ಮೇಲೆ.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು.


ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: “ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಹಾಮನಿಂದ ಮರೆಮಾಡುವುದು ಸರಿಯಲ್ಲ,


ಲೋಟನು ಚೋಗರನ್ನು ಮುಟ್ಟುವಷ್ಟರಲ್ಲಿ ಸೂರ್ಯೋದಯವಾಗಿತ್ತು.


ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.


ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, “ದೇವರು ಆಕಾಶದಿಂದ ಬೆಂಕಿ ಸುರಿಸಿದರು. ಅದು ಕುರಿಗಳನ್ನೂ, ಕೂಲಿ ಆಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ನಿಮ್ಮ ನಾಡಿನ ಮೇಲೆ ಆಕಾಶದಿಂದ ಮಳೆಗೆ ಬದಲಾಗಿ ಧೂಳಿಯನ್ನೂ ಉಸುಬನ್ನೂ ಸರ್ವೇಶ್ವರ ಸುರಿಸುವರು; ಇದರಿಂದ ನೀವು ನಾಶವಾಗಿ ಹೋಗುವಿರಿ.


“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ನಾಡಿಗೆ ಸರ್ವೇಶ್ವರ ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು