Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:25 - ಕನ್ನಡ ಸತ್ಯವೇದವು C.L. Bible (BSI)

25 ಆ ಪಟ್ಟಣಗಳನ್ನು, ಇಡೀ ಆ ಬಯಲುಸೀಮೆಯನ್ನೂ ಅವುಗಳ ನಿವಾಸಿಗಳನ್ನೂ ಹೊಲಗಳ ಬೆಳೆಯೆಲ್ಲವನ್ನೂ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂವಿುಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:25
15 ತಿಳಿವುಗಳ ಹೋಲಿಕೆ  

ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.


ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !


ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆ.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು