Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:38 - ಕನ್ನಡ ಸತ್ಯವೇದವು C.L. Bible (BSI)

38 ಕಿರಿಯಳೂ ಗಂಡುಮಗುವನ್ನು ಹೆತ್ತು ಅದಕ್ಕೆ ‘ಬಿನಮ್ಮಿ’ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಕಿರೀ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ ಬೆನವ್ಮಿು ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲ ಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಚಿಕ್ಕಮಗಳು ಸಹ ಗಂಡುಮಗುವನ್ನು ಹೆತ್ತಳು. ಆಕೆ ತನ್ನ ಮಗನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಅಮ್ಮೋನಿಯರಿಗೆ ಬೆನಮ್ಮಿಯೇ ಮೂಲಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಚಿಕ್ಕವಳು ಸಹ ಮಗನನ್ನು ಹೆತ್ತು, ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗಿನ ಅಮ್ಮೋನಿಯರಿಗೂ ಇವನೇ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:38
15 ತಿಳಿವುಗಳ ಹೋಲಿಕೆ  

ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿ. ನಾನು ಆ ನಾಡನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ನಿಮಗೆ ಅದರಲ್ಲಿ ಕಿಂಚಿತ್ತು ಭಾಗವನ್ನೂ ಕೊಡುವುದಿಲ್ಲ.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.


ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.


“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಸರ್ವೇಶ್ವರನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.


ಆಗ ಸರ್ವೇಶ್ವರ ನನಗೆ, ‘ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸೊತ್ತನ್ನು ಕೊಡುವುದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕು.’ ಎಂದು ಆಜ್ಞಾಪಿಸಿದರು.


ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.


ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಮಾಡವರಿಗೆ ಪ್ರಭೂ, ನೀ ಮಿದ್ಯಾನ್ಯರಿಗೆ ಮಾಡಿದಂತೆ I ಕಿಷೋನ್ ನದಿಯ ಬಳಿ ಸೀಸೆರ್‍ಯಾಬೀನರಿಗೆ ಮಾಡಿದಂತೆ II


“ಮೋವಾಬ್ಯರು ಮತ್ತು ಅಮ್ಮೋನ್ಯರು ಅಹಂಕಾರದಿಂದ ನನ್ನ ಜನರ ವಿರುದ್ಧ ಆಡುವ ಚುಚ್ಚುಮಾತುಗಳು ನನ್ನ ಕಿವಿಗೆ ಬಿದ್ದಿವೆ. ನನ್ನ ಜನರ ನಾಡನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅವರು ಕೊಚ್ಚಿಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು