Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:8 - ಕನ್ನಡ ಸತ್ಯವೇದವು C.L. Bible (BSI)

8 ಕೇಳಿ, ಕನ್ಯೆಯರಾದ ಇಬ್ಬರು ಹೆಣ್ಣುಮಕ್ಕಳು ನನಗಿದ್ದಾರೆ; ಅವರನ್ನು ಬೇಕಾದರೆ ಹೊರಗೆ ಕರೆಯಿಸುತ್ತೇನೆ; ನಿಮಗೆ ಇಷ್ಟಬಂದಂತೆ ಮಾಡಬಹುದು. ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕಾಗಿ ಬಂದವರು; ಅವರಿಗೆ ಏನೂ ಮಾಡಬೇಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನಗೆ ಪುರುಷರನ್ನರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸೇನು; ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು ಎಂದು ಹೇಳಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೋಡಿ! ನನಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಅವರು ಹಿಂದೆಂದೂ ಗಂಡಸರೊಡನೆ ಮಲಗಿದವರಲ್ಲ. ನೀವು ಅವರಿಗೆ ಏನುಬೇಕಾದರೂ ಮಾಡಿ, ಆದರೆ ದಯವಿಟ್ಟು ಈ ಪುರುಷರಿಗೆ ಏನನ್ನೂ ಮಾಡಬೇಡಿ. ಇವರು ನನ್ನ ಮನೆಗೆ ಬಂದಿದ್ದಾರೆ; ಇವರನ್ನು ಕಾಪಾಡುವುದು ನನ್ನ ಕರ್ತವ್ಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗಂಡಸರನ್ನು ಅರಿಯದ ಇಬ್ಬರು ಪುತ್ರಿಯರು ನನಗೆ ಇದ್ದಾರೆ. ಅವರನ್ನು ನಿಮ್ಮ ಬಳಿಗೆ ಕರೆ ತರುವೆನು. ನಿಮ್ಮ ದೃಷ್ಟಿಗೆ ಒಳ್ಳೆಯದೆಂದು ಕಾಣುವ ಹಾಗೆ ನೀವು ಅವರಿಗೆ ಮಾಡಿರಿ. ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ. ಏಕೆಂದರೆ ಅವರು ನನ್ನ ಮನೆಯ ಆಶ್ರಯಕ್ಕೆ ಬಂದಿದ್ದಾರೆ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:8
12 ತಿಳಿವುಗಳ ಹೋಲಿಕೆ  

ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ. ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾಡಿ; ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿ,” ಎಂದನು.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರು!


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.


ಒಡೆಯಾ, ಕೋಪಗೊಳ್ಳಬೇಡಿ. ಈ ಜನರು ಎಂಥ ಹಟಮಾರಿಗಳೆಂದು ನೀವೇ ಬಲ್ಲಿರಿ.


ಅದಕ್ಕೆ ರೂಬೇನನು, “ನಾನು ಈ ಹುಡುಗನನ್ನು ನಿಮಗೆ ಪುನಃ ತಂದೊಪ್ಪಿಸುತ್ತೇನೆ; ಇಲ್ಲದೆಹೋದರೆ ನನ್ನಿಬ್ಬರು ಗಂಡುಮಕ್ಕಳನ್ನು ಕೊಂದುಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಡಿ, ನಾನು ತಪ್ಪದೆ ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬರುತ್ತೇನೆ,” ಎಂದು ಹೇಳಿದ.


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೇ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು.


"ಅಣ್ಣ ತಮ್ಮಂದಿರಾ, ನಿಮ್ಮನ್ನು ವಿನಂತಿಸಿ ಕೇಳಿಕೊಳ್ಳುತ್ತೇನೆ: ಈ ಪಾತಕ ಮಾತ್ರ ಮಾಡಬೇಡಿ;


ಆಗ ಆ ಮುದುಕ ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನ ಮಾಡಬೇಡಿ.


ಕುಚೋದ್ಯಗಾರರನ್ನು ಶಿಕ್ಷಿಸುವವನು ತನ್ನನ್ನೆ ಅಪಮಾನಕ್ಕೆ ಗುರಿಮಾಡಿಕೊಳ್ಳುತ್ತಾನೆ. ದುಷ್ಟನನ್ನು ಗದರಿಸುವವನು ತನಗೇ ಕಳಂಕ ತಂದುಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು