Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:1 - ಕನ್ನಡ ಸತ್ಯವೇದವು C.L. Bible (BSI)

1 ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:1
34 ತಿಳಿವುಗಳ ಹೋಲಿಕೆ  

ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”


ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.


ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಯೇಲ್ ದೇವರಾದ ಸರ್ವೇಶ್ವರ ತಮಗಾಗಿ ಒಂದು ದೇವಾಲಯವನ್ನೂ ರಾಜನಿಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ ಹಾಗೂ ವಿವೇಕಗಳುಳ್ಳ ಒಬ್ಬ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದಾರೆ; ಅವರಿಗೆ ಸ್ತೋತ್ರವಾಗಲಿ!


ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.


ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.


ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.


ಅನ್ಯ ದೇವರುಗಳನ್ನಾಗಲಿ, ಪೂಜಿಸಬಾರದೆಂದು ನಿಷೇಧಿಸಿರುವ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ, ಪೂಜಿಸಿ, ಆರಾಧಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದುಷ್ಟವಾದುದನ್ನು ನಡೆಸಿದ್ದಾರೆ ಎಂದೂ


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


“ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.


ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ?


ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.


ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು