Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:11 - ಕನ್ನಡ ಸತ್ಯವೇದವು C.L. Bible (BSI)

11 ಮೊದಲನೆಯದರ ಹೆಸರು ಪೀಶೋನ್. ಇದು ಬಂಗಾರ ದೊರಕುವ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. ಆ ದೇಶದ ಬಂಗಾರ ಅಪ್ಪಟವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರ ದೊರಕುವ ಹವೀಲ ದೇಶವನ್ನೆಲ್ಲಾ ಸುತ್ತುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೊದಲನೆ ನದಿಯ ಹೆಸರು ಪೀಶೋನ್. ಹವೀಲ ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರವಿರುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:11
9 ತಿಳಿವುಗಳ ಹೋಲಿಕೆ  

ಇಷ್ಮಾಯೇಲ್ಯರು ಹವೀಲ ಹಾಗು ಶೂರಿನ ಮಧ್ಯೆಯಿರುವ ಪ್ರದೇಶದಲ್ಲಿ ವಾಸಮಾಡಿದರು. ಶೂರ್ ಈಜಿಪ್ಟಿನ ಪೂರ್ವಕ್ಕೆ ಅಸ್ಸೀರಿಯಗೆ ಹೋಗುವ ಹಾದಿಯಲ್ಲಿದೆ. ಹೀಗೆ ಇಷ್ಮಾಯೇಲ್ಯರು ತಮ್ಮ ಸಂಬಂಧಿಕರಿಗೆ ಎದುರುಬದುರಿನಲ್ಲೇ ವಾಸಮಾಡಿದರು.


ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಸದೆಬಡಿಯುತ್ತಾ ಹೋದನು.


ಓಫೀರ್, ಹವೀಲ, ಯೋಬಾಬ್ ಎಂಬ ಸ್ಥಳಗಳವರು. ಈ ಕುಲಗಳೆಲ್ಲ ಯೋಕ್ತಾನನಿಂದ ಹುಟ್ಟಿದವು.


ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


‘ಬದೋಲಖ’ ಎಂಬ ವಿಶೇಷ ಸಾಂಬ್ರಾಣಿ, ‘ಗೋಮೇಧಿಕ’ ಎಂಬ ರತ್ನವೂ ಅಲ್ಲಿ ದೊರಕುತ್ತವೆ.


ಎರಡನೆ ನದಿಯ ಹೆಸರು ಗೀಹೋನ್, ಇದು ಕೂಷ್ ದೇಶವನ್ನೆಲ್ಲಾ ಸುತ್ತುತ್ತದೆ.


“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.


ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೊಕ್ತಾನನ ಸಂತಾನದವರು.


“ಬೆಳ್ಳಿ ಸಿಕ್ಕುವ ಗಣಿಯುಂಟು ಚಿನ್ನದ ಅದುರು ದೊರಕುವ ಎಡೆಯುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು