Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:16 - ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಯೆಹೋವದೇವರು ಆ ಮನುಷ್ಯನಿಗೆ - ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಫವಾಗಿ ತಿನ್ನಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರಾದ ಯೆಹೋವನು ಆ ಮನುಷ್ಯನಿಗೆ, “ತೋಟದಲ್ಲಿರುವ ಯಾವ ಮರದ ಹಣ್ಣನ್ನು ಬೇಕಾದರೂ ನೀನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಯೆಹೋವ ದೇವರು ಮನುಷ್ಯನಿಗೆ, “ನೀನು ತೋಟದ ಎಲ್ಲಾ ಮರಗಳ ಹಣ್ಣುಗಳನ್ನು ನಿನ್ನ ಇಷ್ಟಾನುಸಾರವಾಗಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:16
8 ತಿಳಿವುಗಳ ಹೋಲಿಕೆ  

ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದೇ. ಅವರಿಗೆ ಸ್ತುತಿಸಲ್ಲಿಸಿ ಸ್ವೀಕರಿಸಿದ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.


ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು.


ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು.


ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು