Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:17 - ಕನ್ನಡ ಸತ್ಯವೇದವು C.L. Bible (BSI)

17 ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದ ದಿನ ಸತ್ತೇಹೋಗುವಿ ಎಂದು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:17
43 ತಿಳಿವುಗಳ ಹೋಲಿಕೆ  

ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ಪಾಪವೇ ಸಾವಿನ ವಿಷಕೊಂಡಿ. ಪಾಪಕ್ಕೆ ಶಕ್ತ್ಯಾಧಾರ ಶಾಸ್ತ್ರವಿಧಿಗಳೇ.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪಕ್ಕೆ ವಿಮುಖರಾಗಿ ಜೀವಿಸಿರಿ; ಇದು ಸರ್ವೇಶ್ವರನಾದ ದೇವರ ನುಡಿ.”


ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.


“ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ.


ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.


ನಾನು ದುಷ್ಟನಿಗೆ, ‘ನೀನು ಸತ್ತೇ ಸಾಯುವೆ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನ್ಯಾಯನೀತಿಗಳನ್ನು ನಡೆಸಲು


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


“ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


“ನೀನು ಈ ಊರನ್ನು ಬಿಟ್ಟು ಎಲ್ಲಿಗಾದರು ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ಖಂಡಿತವಾಗಿ ಹೇಳಿ ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡನಲ್ಲವೆ? ಆಗ ನೀನು, ‘ಒಳ್ಳೆಯದು, ಹಾಗೆಯೇ ಮಾಡುತ್ತೇನೆ,’ ಎಂದು ಹೇಳಿದೆಯಲ್ಲವೆ?


ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು.


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.


ಆಗ ಅರಸನು ಅವನಿಗೆ, “ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು,” ಎಂದು ಹೇಳಿದನು.


ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು.


ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದನು.


ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.


ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು