Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:18 - ಕನ್ನಡ ಸತ್ಯವೇದವು C.L. Bible (BSI)

18 ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ಯೆಹೋವದೇವರು - ಮನುಷ್ಯನು ಒಂಟಿಗನಾಗಿರುವದು ಒಳ್ಳೇದಲ್ಲ; ಅವನಿಗೆ ಸರಿಬೀಳುವ ಸಹಕಾರಿಯನ್ನು ಉಂಟುಮಾಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:18
10 ತಿಳಿವುಗಳ ಹೋಲಿಕೆ  

ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.


ಮಡದಿಯನ್ನು ಪಡೆಯುವುದು ಪುಣ್ಯಪಡೆದ ಹಾಗೆ, ಅದು ಸರ್ವೇಶ್ವರನ ಅನುಗ್ರಹಪಡೆದ ಹಾಗೆ.


ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು


ಒಂದು ದಿನ ನವೊಮಿ ರೂತಳಿಗೆ, “ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?


ಒಬ್ಬನು ತನಗೆ ನಿಶ್ಚಿತವಾದ ಕನ್ಯೆಯೊಡನೆ ಅನುಚಿತ ರೀತಿಯಲ್ಲಿ ವರ್ತಿಸುತ್ತಿರಬಹುದು; ಅವನಿಗೆ ಸಂಯಮ ತಪ್ಪುವಂತಿದ್ದರೆ, ತಾನು ಆಶಿಸುವಂತೆ ಅವನು ಮದುವೆಮಾಡಿಕೊಳ್ಳಲಿ, ಅದು ಪಾಪವಲ್ಲ.


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು