Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:2 - ಕನ್ನಡ ಸತ್ಯವೇದವು C.L. Bible (BSI)

2 ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:2
11 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದ ಒಂದೆಡೆಯಲ್ಲಿ, ಏಳನೆಯ ದಿನವನ್ನು ಕುರಿತು: “ದೇವರು ತಮ್ಮ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂದು ಬರೆದದೆ.


ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”


ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.


ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿಪಡೆದಂತೆ ದೇವರ ವಿಶ್ರಾಂತಿಯನ್ನು ಪಡೆದವನು ಸಹ ತನ್ನ ಕೆಲಸಕಾರ್ಯಗಳನ್ನು ಮುಗಿಸಿ ವಿಶ್ರಾಂತಿಯನ್ನು ಪಡೆಯುತ್ತಾನೆ.


ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.


ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು