ಆದಿಕಾಂಡ 2:21 - ಕನ್ನಡ ಸತ್ಯವೇದವು C.L. Bible (BSI)21 ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗಿರುವಲ್ಲಿ ಯೆಹೋವದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಆ ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಅಧ್ಯಾಯವನ್ನು ನೋಡಿ |