Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:24 - ಕನ್ನಡ ಸತ್ಯವೇದವು C.L. Bible (BSI)

24 ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:24
23 ತಿಳಿವುಗಳ ಹೋಲಿಕೆ  

ಉದಾಹರಣೆಗೆ, ಪತಿಯು ಬದುಕಿರುವವರೆಗೆ ಸತಿ ಅವನಿಗೆ ಶಾಸನಾನುಸಾರವಾಗಿ ಬದ್ಧಳು. ಒಂದು ವೇಳೆ, ಆಕೆಯ ಪತಿ ಸತ್ತುಹೋದರೆ, ಆಕೆ ವಿವಾಹಬಂಧನದಿಂದ ಬಿಡುಗಡೆ ಹೊಂದುತ್ತಾಳೆ.


ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು.


ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.


ಎಲೌ ಕುವರಿಯೇ, ಕೇಳು, ಎನ್ನ ಮಾತಿಗೆ ಕಿವಿಗೊಡು I ನಿನ್ನ ಜನರನು, ತೌರು ಮನೆಯನು ಮರೆತುಬಿಡು II


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಸರ್ವೇಶ್ವರನನ್ನೇ ಅಂಟಿಕೊಂಡಿರಿ.


ಲೆಮೆಕನಿಗೆ ‘ಆದಾ’ ಹಾಗು ‘ಚಿಲ್ಲಾ’ ಎಂಬ ಇಬ್ಬರು ಹೆಂಡಿರು.


ನಿನ್ನನ್ನು ಅದು ತಪ್ಪಿಸುವುದು ತನ್ನ ಯೌವನಕಾಲದ ಪ್ರಿಯನನ್ನು ತ್ಯಜಿಸಿದವಳಿಂದ, ತನ್ನ ದೇವರ ಮುಂದೆ ಮಾಡಿದ ಒಪ್ಪಂದವನ್ನು ಮರೆತವಳಿಂದ.


ದಾವೀದನು ಜೆಸ್ರೀಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಈಗ ಅಬೀಗೈಲಳೂ ಅವನ ಹೆಂಡತಿಯಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು