Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:3 - ಕನ್ನಡ ಸತ್ಯವೇದವು C.L. Bible (BSI)

3 ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿ ಆ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:3
22 ತಿಳಿವುಗಳ ಹೋಲಿಕೆ  

ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.


ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.


ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.


“ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.


ಕಲಿಸಿದಿರಿ ಅವರಿಗೆ ಆಜ್ಞಾವಿಧಿ ಧರ್ಮಗಳನು ಪ್ರಕಟಿಸಿದಿರಿ ನಿಮಗೆ ಮೀಸಲಾದ ವಿಶ್ರಾಂತಿ ದಿನವನು; ನಿಮ್ಮ ದಾಸ ಮೋಶೆಯ ಮುಖಾಂತರ ಸಾಧಿಸಿದಿರಿದನು.


ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು