Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:7
33 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ನಾನು ನಿರ್ಮಿತನಾಗಿದ್ದೇನೆ ದೇವರಾತ್ಮನಿಂದ ನನಗೆ ಜೀವ ಉಂಟಾಗಿದೆ ಸರ್ವಶಕ್ತನ ಶ್ವಾಸದಿಂದ.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ನನ್ನಲ್ಲಿ ಜೀವ ಉಸಿರಾಡುತ್ತಿರುವವರೆಗೆ, ನನ್ನ ಮೂಗಲ್ಲಿ ದೇವರು ಊದಿದ ಶ್ವಾಸವಿರುವವರೆಗೆ,


ಉಸಿರಾಡುವ ಭೂಮಿಯ ಜಂತುಗಳೆಲ್ಲ ಸತ್ತುಹೋದವು.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡಲೆಂದು ಏದೆನ್ ತೋಟದಿಂದ ಹೊರಡಿಸಿಬಿಟ್ಟರು.


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಮನುಷ್ಯನ ಆತ್ಮ ಸರ್ವೇಶ್ವರನು ಕೊಟ್ಟ ದೀಪ; ಅಂತರಂಗವನ್ನೆಲ್ಲ ಶೋಧಿಸಬಲ್ಲದು ಅದರ ಪ್ರಕಾಶ.


ನೋಡು, ನಾನು ಕೂಡ ಜೇಡಿಮಣ್ಣಿನಿಂದ ರೂಪಿತನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇರುವವನು.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ.


ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.


ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.


ಏಕೆಂದರೆ, ದೇವರು ಮೊದಲು ಆದಾಮನನ್ನು, ಅನಂತರ ಹವ್ವಳನ್ನು ಸೃಷ್ಟಿಸಿದರು.


ಆದರೂ ಭೂಮಿಯಿಂದ ನೀರು ಉಕ್ಕಿಬಂದು ನೆಲಕ್ಕೆ ನೀರೆರೆಯುತ್ತಿತ್ತು.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ಸರ್ವೇಶ್ವರನಾದ ದೇವರು ನಿಮಗೆ ಹೀಗೆ ಹೇಳುತ್ತಾರೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.


ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು