Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:9 - ಕನ್ನಡ ಸತ್ಯವೇದವು C.L. Bible (BSI)

9 “ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:9
19 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”


ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು.


ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.


ಜೀವದಾಯಕ ರೊಟ್ಟಿ ನಾನೇ.


ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ನಮ್ಮ ದೇವರಾದ ಸರ್ವೇಶ್ವರ ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಅವರ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿತರಾಗುವೆವು,’ ಎಂದು ನೀವು ಉತ್ತರಕೊಡಬೇಕು.


ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.


ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು