Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:12 - ಕನ್ನಡ ಸತ್ಯವೇದವು C.L. Bible (BSI)

12 ಅದೂ ಅಲ್ಲದೆ ಈಕೆ ನಿಜವಾಗಿಯೂ ನನ್ನ ತಂಗಿ, ನನ್ನ ತಂದೆಯ ಮಗಳು, ಆದರೆ ನನ್ನ ತಾಯಿಯ ಮಗಳಲ್ಲ; ಎಂದೇ ನನಗೆ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದದರಿಂದ ನನಗೆ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಕೆ ನನ್ನ ಹೆಂಡತಿಯೇನೋ ನಿಜ, ಆದರೆ ಆಕೆ ನನಗೆ ತಂಗಿಯೂ ಆಗಬೇಕು. ಆಕೆ ನನ್ನ ತಂದೆಯ ಮಗಳು; ನನ್ನ ತಾಯಿಯ ಮಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ನಿಜವಾಗಿಯೂ ಅವಳು ನನ್ನ ತಂಗಿ, ಆದರೆ ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ, ನನಗೆ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:12
8 ತಿಳಿವುಗಳ ಹೋಲಿಕೆ  

ಅಬ್ರಾಮನು ಮತ್ತು ನಾಹೋರನು ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆ ಹಾರಾನನ ಮಗಳು; ಹಾರಾನನು ಮಿಲ್ಕಳಿಗು ಹಾಗೂ ಇಸ್ಕಳಿಗು ತಂದೆ.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು.


ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.


ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.


ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.


ಅಲ್ಲಿಯ ಜನರು ಅವನ ಹೆಂಡತಿಯ ವಿಷಯವಾಗಿ ವಿಚಾರಿಸಿದರು. “ಅವಳು ನನ್ನ ತಂಗಿ”, ಎಂದು ಇಸಾಕನು ಹೇಳಿದನು. ರೆಬೆಕ್ಕಳು ಬಲು ಚೆಲುವೆಯಾಗಿದ್ದರಿಂದ ಆಕೆಯ ನಿಮಿತ್ತ ತನ್ನನ್ನು ಕೊಂದಾರು ಎಂದು ಹೆದರಿ ಹಾಗೆ ಹೇಳಿದನು.


ಇಂಥ ಹುಚ್ಚುತನ ಬೇಡ, ಈ ಅವಮಾನವನ್ನು ಮರೆಮಾಡುವುದು ಹೇಗೆ? ನಿನಗಂತೂ ಇಸ್ರಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು