Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:16 - ಕನ್ನಡ ಸತ್ಯವೇದವು C.L. Bible (BSI)

16 ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಅವನು ಸಾರಳಿಗೆ - ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಲಕ್ಷ್ಯಕ್ಕೆ ತೆಗೆದುಕೊಳ್ಳದಂತೆ ಇದು ಪ್ರಾಯಶ್ಚಿತ್ತವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣವನ್ನು ಕೊಟ್ಟಿದ್ದೇನೆ. ನೋಡು, ನಡೆದ ಘಟನೆಗೆ ಇದು ಪ್ರಾಯಶ್ಚಿತ್ತವಾಗಿದೆ. ನಿನ್ನ ಸಂಗಡ ಇರುವವರೆಲ್ಲರಿಗೂ ಉಳಿದವರೆಲ್ಲರಿಗೂ ನೀನು ನಿರ್ದೋಷಿಯೆಂದು ಇದು ಸಾಕ್ಷಿಯಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:16
11 ತಿಳಿವುಗಳ ಹೋಲಿಕೆ  

ಮರೆಯಾದ ಪ್ರೀತಿಗಿಂತ ಬಹಿರಂಗವಾದ ಗದರಿಕೆ ಲೇಸು.


ಆ ಮನುಷ್ಯನೇ ಈಕೆ ನನಗೆ ತಂಗಿಯಾಗಬೇಕೆಂದು ಹೇಳಿದ; ಈಕೆಯೂ ಆತನು ನನಗೆ ಅಣ್ಣನಾಗಬೇಕೆಂದು ಹೇಳಿದಳು. ಶುದ್ಧಮನಸ್ಸಿನಿಂದ ಹಾಗೂ ಶುದ್ಧಹಸ್ತದಿಂದ ಈ ಕಾರ್ಯಮಾಡಿದೆ,” ಎಂದನು.


“ನಮ್ಮ ಕಡೆ ಹೊಲದಲ್ಲಿ ನಡೆದು ಬರುತ್ತಿರುವ ಆ ಮನುಷ್ಯ ಯಾರು?” ಎಂದು ಆ ಸೇವಕನನ್ನು ಕೇಳಿದಳು. “ಅವನೇ ನನ್ನೊಡೆಯ” ಎಂದು ಹೇಳಿದಾಗ ಆಕೆ ಮುಸಕುಹಾಕಿಕೊಂಡಳು.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಬಳಿಕ ತನ್ನ ಪ್ರಜೆಗಳಿಗೆ ಈ ಆಜ್ಞೆಯನ್ನು ಹೊರಡಿಸಿದನು. “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ಮರಣದಂಡನೆ ತಪ್ಪದು.”


ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು