Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:17 - ಕನ್ನಡ ಸತ್ಯವೇದವು C.L. Bible (BSI)

17 ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17-18 ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆಮಾಡಿದನು. ದೇವರು ಅಬೀಮೆಲೆಕನನ್ನೂ, ಅವನ ಹೆಂಡತಿಯನ್ನೂ ದಾಸಿಯರನ್ನೂ ವಾಸಿಮಾಡಿದರು. ಆದ್ದರಿಂದ ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:17
18 ತಿಳಿವುಗಳ ಹೋಲಿಕೆ  

ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಸಹೋದರರೇ, ನಮಗಾಗಿಯೂ ಪ್ರಾರ್ಥಿಸಿರಿ.


ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ.


ಸರ್ವೇಶ್ವರನು ದುರುಳರಿಗೆ ದೂರ; ನೀತಿವಂತರ ಪ್ರಾರ್ಥನೆಗೆ ಹತ್ತಿರ.


ಆಗ ಮೋಶೆ ಸರ್ವೇಶ್ವರನಿಗೆ, “ಹೇ ದೇವಾ, ಆಕೆಯನ್ನು ಗುಣಪಡಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಮೊರೆಯಿಟ್ಟನು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಆದರೆ ಅಬ್ರಾಮನ ಹೆಂಡತಿಯನ್ನು ಕರೆಸಿಕೊಂಡ ಕಾರಣ ಫರೋಹನಿಗೂ ಮತ್ತು ಅವನ ಮನೆಯವರಿಗೂ ಸರ್ವೇಶ್ವರ ದೊಡ್ಡ ದೊಡ್ಡ ಗಂಡಾಂತರಗಳನ್ನು ಬರಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು