Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:18 - ಕನ್ನಡ ಸತ್ಯವೇದವು C.L. Bible (BSI)

18 ಇದಕ್ಕೆ ಮುಂಚೆ ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರೆಲ್ಲರನ್ನು ಸರ್ವೇಶ್ವರ ಸ್ವಾಮಿ ಬಂಜೆಯರನ್ನಾಗಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮುಂಚೆ ಅಬ್ರಹಾಮನ ಹೆಂಡತಿಯಾದ ಸಾರಳ ನಿವಿುತ್ತ ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಯೆಹೋವ ದೇವರು ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರನ್ನು ಬಂಜೆಯರನ್ನಾಗಿ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:18
6 ತಿಳಿವುಗಳ ಹೋಲಿಕೆ  

ಆದರೆ ಅಬ್ರಾಮನ ಹೆಂಡತಿಯನ್ನು ಕರೆಸಿಕೊಂಡ ಕಾರಣ ಫರೋಹನಿಗೂ ಮತ್ತು ಅವನ ಮನೆಯವರಿಗೂ ಸರ್ವೇಶ್ವರ ದೊಡ್ಡ ದೊಡ್ಡ ಗಂಡಾಂತರಗಳನ್ನು ಬರಮಾಡಿದರು.


ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.


ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.


ಇದಲ್ಲದೆ, “ಸರ್ವೇಶ್ವರ ನಿನ್ನನ್ನು ಬಂಜೆಯಾಗಿ ಮಾಡಿದ್ದಾರೆ,” ಎಂಬ ಚುಚ್ಚು ಮಾತುಗಳಿಂದ ನೋಯಿಸುತ್ತಿದ್ದಳು ಅವಳ ಸವತಿಯಾದ ಪೆನಿನ್ನಳು.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು