Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:4 - ಕನ್ನಡ ಸತ್ಯವೇದವು C.L. Bible (BSI)

4 ಅಬೀಮೆಲೆಕನು ಆಕೆಯನ್ನು ಅಲ್ಲಿಯವರೆಗೂ ಕೂಡಿರಲಿಲ್ಲ. ಎಂದೇ ಅವನು, “ಸ್ವಾಮೀ ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, “ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಬೀಮೆಲೆಕನು ಆಕೆಯನ್ನು ಕೂಡಲಿಲ್ಲವಾದ್ದರಿಂದ ಅವನು - ಸ್ವಾಮೀ, ನಿರಪರಾಧಿಯಾದ ಜನವನ್ನೂ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಬೀಮೆಲೆಕನು ಇನ್ನೂ ಸಾರಳೊಡನೆ ಮಲಗಿಕೊಂಡಿರಲಿಲ್ಲ. ಆದ್ದರಿಂದ ಅಬೀಮೆಲೆಕನು, “ಸ್ವಾಮಿ, ನಾನು ತಪ್ಪಿತಸ್ಥನಲ್ಲ. ಒಬ್ಬ ನಿರಪರಾಧಿಯನ್ನು ನೀನು ಕೊಲ್ಲುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅಬೀಮೆಲೆಕನು ಆಕೆಯ ಸಮೀಪಕ್ಕೆ ಬಂದಿರಲಿಲ್ಲ. ಆದ್ದರಿಂದ ಅವನು, “ಪ್ರಭುವೇ, ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:4
7 ತಿಳಿವುಗಳ ಹೋಲಿಕೆ  

ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.


ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.


ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ಆ ಮನುಷ್ಯನೇ ಈಕೆ ನನಗೆ ತಂಗಿಯಾಗಬೇಕೆಂದು ಹೇಳಿದ; ಈಕೆಯೂ ಆತನು ನನಗೆ ಅಣ್ಣನಾಗಬೇಕೆಂದು ಹೇಳಿದಳು. ಶುದ್ಧಮನಸ್ಸಿನಿಂದ ಹಾಗೂ ಶುದ್ಧಹಸ್ತದಿಂದ ಈ ಕಾರ್ಯಮಾಡಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು