7 ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.
7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.
7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.
7 ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.
7 ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.
ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.
ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.
ನಾಮಾನನು ಇದನ್ನು ಕೇಳಿ ಕೋಪಗೊಂಡನು . “ಇದೇನು ! ಇವನು ಖಂಡಿತ ವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರ ನ ಹೆಸರು ಹೇಳಿ, ನನ್ನ ಚರ್ಮ ದ ಮೇಲೆ ಕೈಯಾಡಿಸಿ , ರೋಗ ವಾಸಿ ಮಾಡುವನೆಂದು ನೆನಸಿದೆ .
ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.
ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು.
ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.
ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಸರ್ವೇಶ್ವರನ ವಾಕ್ಯ ಅವರಲ್ಲಿ ನೆಲೆಸಿದ್ದರೆ, ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸರ್ವಶಕ್ತ ಸರ್ವೇಶ್ವರನಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.”
ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!
ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.
ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.
ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.
ಅಂಥವರು ಆಯಾ ವಸ್ತುಗಳನ್ನು, ಅಂದರೆ ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು, ತಮ್ಮ ವಶಕ್ಕೆ ತೆಗೆದುಕೊಂಡದ್ದನ್ನು ಪೂರ್ತಿಯಾಗಿ ಹಿಂದಕ್ಕೆ ತಂದುಕೊಡಬೇಕು. ಅದೂ ಅಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಸೇರಿಸಿಕೊಡಬೇಕು. ಅವರು ಪರಿಹಾರ ಮಾಡುವ ದಿನದಲ್ಲೆ ಅದನ್ನು ಅದರ ನಿಜವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ.