Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:14 - ಕನ್ನಡ ಸತ್ಯವೇದವು C.L. Bible (BSI)

14 ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:14
28 ತಿಳಿವುಗಳ ಹೋಲಿಕೆ  

ದಾಸನಾದವನು ಶಾಶ್ವತವಾಗಿ ಮನೆಯಲ್ಲಿ ಇರುವಂತಿಲ್ಲ. ಶಾಶ್ವತವಾಗಿ ಇರುವವನು ಪುತ್ರನೇ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಮುಂಜಾನೆಯೆ ಅಬ್ಬರದಿಂದ ನೆರೆಯವನನ್ನು ಎಬ್ಬಿಸಿ ಮಾಡುವ ಆಶೀರ್ವಾದ, ಶಾಪವೆಂದೇ ಪರಿಗಣಿಸಲ್ಪಡುವುದು.


ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II


ಅಲೆದರು ಮರುಳುಗಾಡಿನಲಿ ದಾರಿಕಾಣದೆ I ಬಳಲಿದರು ಜನರಿರುವ ಊರು ಸಿಗದೆ II


ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.


ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಇಸಾಕನು ಅವರನ್ನು ಬೀಳ್ಕೊಡಲು ಅವರು ಸಮಾಧಾನದಿಂದ ಹೊರಟುಹೋದರು.


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ದೂರಕ್ಕೆ ಪೂರ್ವದಿಕ್ಕಿನಲ್ಲಿದ್ದ ಕೆದೆಮ್ ನಾಡಿಗೆ, ಕಳಿಸಿಬಿಟ್ಟನು.


ಹೀಗೆ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದ ಕಾರಣ, ಆ ಸ್ಥಳಕ್ಕೆ ‘ಬೇರ್ಷೆಬ’ ಎಂದು ಹೆಸರಾಯಿತು.


ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.


ನಿಸ್ಸಾರವಾಗಿದೆ ಹೆಷ್ಬೋನಿನ ಹೊಲ, ಸಿಬ್ಮದ ದ್ರಾಕ್ಷಾಲತೆ, ಒಮ್ಮೆ ವ್ಯಾಪಿಸಿತ್ತು ಆ ರಾಜ್ಯದ್ರಾಕ್ಷಿ ಯಜ್ಜೇರಿನವರೆಗೆ, ಹಬ್ಬಿತ್ತದರ ಶಾಖೆ ಮರುಭೂಮಿಗೆ, ಸಮುದ್ರದಾಚೆ, ಮಾಡಿತು ನಾಡಿನೊಡೆಯರನು ಕುಡಿದು ಮತ್ತರಾಗುವಂತೆ.


ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು.


ಜೋಸೆಫನು ಹೊರಟ. ಶೆಕೆಮ್‍ಗೆ ಬಂದು ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನನ್ನು ಕಂಡ. ಆ ಮನುಷ್ಯ, “ಏನು ಹುಡುಕುತ್ತಾ ಇದ್ದೀಯಾ?” ಎಂದು ವಿಚಾರಿಸಿದ.


ಇಸಾಕನು ಆ ಬಾವಿಗೆ, ‘ಷೆಬಾ’ ಎಂದು ಹೆಸರಿಟ್ಟನು. ಈ ಕಾರಣ ಅಲ್ಲಿರುವ ಊರಿಗೆ ‘ಬೇರ್ಷೆಬ’ ಎಂದು ಹೆಸರಾಯಿತು.


ಅವನು ಮತ್ತು ಅವನ ಸಂಗಡ ಬಂದಿದ್ದವರು ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದು, “ನನ್ನೊಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದ ಆ ಸೇವಕ.


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.


ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಇತ್ತ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಸರ್ವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಮರಳಿ ಬಂದನು.


ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದರು.


ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು,


ಮನೆಬಿಟ್ಟು ಅಲೆಯುವ ವ್ಯಕ್ತಿ, ಗೂಡುಬಿಟ್ಟು ಅಲೆಯುವ ಹಕ್ಕಿ.


ಯಕೋಬನು ಬೆಳಗಿನ ಜಾವದಲ್ಲಿ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಆ ಕಲ್ಲನ್ನು ಸ್ಮಾರಕಸ್ತಂಭವಾಗಿ ನೆಟ್ಟನು. ಅದರ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿದನು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಅವನೊಂದಿಗೆ ಇಸ್ರಯೇಲರು ಎಲ್ಲರೂ ಶಿಟ್ಟೀಮನ್ನು ಬಿಟ್ಟು ಜೋರ್ಡನ್ನಿನ ಹತ್ತಿರಕ್ಕೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.


ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.


ಅರಸ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಸರ್ವೇಶ್ವರನ ಆಲಯಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು