Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:15 - ಕನ್ನಡ ಸತ್ಯವೇದವು C.L. Bible (BSI)

15 ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:15
9 ತಿಳಿವುಗಳ ಹೋಲಿಕೆ  

ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಆಗ ಇಸ್ರಯೇಲ್, ಜುದೇಯ ಹಾಗು ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದಿದ್ದ ಪಶುಗಳಿಗೂ ನೀರು ಸಿಕ್ಕದೆಹೋಯಿತು.


ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು.


ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು