Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:17 - ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:17
31 ತಿಳಿವುಗಳ ಹೋಲಿಕೆ  

ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು.


ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ : ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.


ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಜನರು ಗೋಳಾಡುವುದಕ್ಕೇನು ಕಾರಣವೆಂದು ಕೇಳಲು ಯಾಬೇಷಿನವರ ವರ್ತಮಾನವನ್ನು ಅವನಿಗೆ ತಿಳಿಸಲಾಯಿತು.


ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪುಕೂಡಿಸಿಕೊಂಡು ಬಂದದ್ದೇಕೆ?” ಎಂದು ಕೇಳಿದರು.


ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು.


ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.


ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.


ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,


ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು