Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:2 - ಕನ್ನಡ ಸತ್ಯವೇದವು C.L. Bible (BSI)

2 ಆಕೆ ಗರ್ಭಿಣಿಯಾಗಿ ಅಬ್ರಹಾಮನಿಂದ ಒಬ್ಬ ಮಗನನ್ನು ಹೆತ್ತಳು, ಅದೂ ಅಬ್ರಹಾಮನು ಮುದುಕನಾಗಿದ್ದಾಗ, ದೇವರು ಮೊದಲೇ ನಿರ್ಧರಿಸಿದ್ದ ಕಾಲಕ್ಕೆ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೇಗಂದರೆ ಸಾರಳು ಬಸುರಾಗಿ ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಈ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ಅಬ್ರಹಾಮನಿಗೆ ಹೇಳಿದ ಸಮಯದಲ್ಲಿ ಅವನು ಮುದುಕನಾಗಿದ್ದಾಗ, ಸಾರಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:2
12 ತಿಳಿವುಗಳ ಹೋಲಿಕೆ  

ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು.


ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.


ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.


ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು; ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ.


ಆ ವಾಗ್ದಾನ ಹೀಗಿತ್ತು: “ನಿಯಮಿತ ಕಾಲದಲ್ಲಿ ನಾನು ಮರಳಿ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು.”


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು, ಕಾನಾನ್ ನಾಡಿನಲ್ಲೆಲ್ಲಾ ಸಂಚಾರ ಮಾಡಿಸಿದೆ. ಇಸಾಕನೆಂಬ ಮಗನನ್ನು ಕೊಟ್ಟು, ಅವನ ಸಂತಾನವನ್ನು ಹೆಚ್ಚಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು