Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:32 - ಕನ್ನಡ ಸತ್ಯವೇದವು C.L. Bible (BSI)

32 ಬೇರ್ಷೆಬದಲ್ಲಿ ಅವರು ಒಪ್ಪಂದಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಪತಿ ಫೀಕೋಲನು ಫಿಲಿಷ್ಟಿಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಸೇನಾಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಬೇರ್ಷೆಬದಲ್ಲಿ ಒಪ್ಪಂದವನ್ನು ಮಾಡಿಕೊಂಡ ಮೇಲೆ ಅಬೀಮೆಲೆಕನು ಮತ್ತು ಅವನ ಸೈನ್ಯಾಧಿಕಾರಿಯು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:32
12 ತಿಳಿವುಗಳ ಹೋಲಿಕೆ  

ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.


ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.


ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ಅವನಿಗೆ ದನಕುರಿಗಳೂ ಆಳುಕಾಳುಗಳೂ ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.


ಅವನು, ಆ ಸ್ಥಳದಲ್ಲಿ ಬಹಳ ದಿವಸ ತಂಗಿದ್ದನು. ಒಂದು ದಿನ ಫಿಲಿಷ್ಟಿಯ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.


ಆಗ ಅಬ್ರಹಾಮನು ಅಬೀಮೆಲೆಕನಿಗೆ ದನಕುರಿಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರು ಒಂದು ಒಪ್ಪಂದ ಮಾಡಿಕೊಂಡರು.


ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.


ಕಸ್ಲುಹ್ಯರೂ ಕೆಪ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಬಂದವರು ಫಿಲಿಷ್ಟಿಯರು.


ಹೀಗೆ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದ ಕಾರಣ, ಆ ಸ್ಥಳಕ್ಕೆ ‘ಬೇರ್ಷೆಬ’ ಎಂದು ಹೆಸರಾಯಿತು.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಬಾ, ನಾನೂ ನೀನೂ ಒಂದು ಒಪ್ಪಂದ ಮಾಡಿಕೊಳ್ಳೋಣ; ಅದು ನನಗೂ ನಿನಗೂ ಸಾಕ್ಷಿಯಾಗಿರಲಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು