Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:6 - ಕನ್ನಡ ಸತ್ಯವೇದವು C.L. Bible (BSI)

6 ಸಾರಳು ಇಂತೆಂದುಕೊಂಡಳು: “ತಂದಿಹನಿದೋ ಎನಗೊಂದು ‘ನಗು’ವನು ಆ ದೇವನು, ನಕ್ಕು ನಲಿವರೆನ್ನೊಡನೆ ಇದನು ಕೇಳುವವರೆಲ್ಲರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಾರಳು - ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ; ಕೇಳುವವರೆಲ್ಲರೂ ನನ್ನೊಡನೆ ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಾರಳು, “ದೇವರು, ನನ್ನನ್ನು ನಗುವಂತೆ ಮಾಡಿದ್ದಾನೆ, ಇದನ್ನು ಕೇಳಿದ ಪ್ರತಿಯೊಬ್ಬರು ನನ್ನೊಡನೆ ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸಾರಳು, “ದೇವರು ನನ್ನನ್ನು ನಗುವಂತೆ ಮಾಡಿದ್ದಾರೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:6
17 ತಿಳಿವುಗಳ ಹೋಲಿಕೆ  

ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II


ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ಆದರೆ, "ನೂರು ವರ್ಷದವನಿಗೆ ಮಗ ಹುಟ್ಟುವುದುಂಟೆ? ತೊಂಬತ್ತು ವರ್ಷದವಳಾದ ಸಾರಳು ಹೆತ್ತಾಳೆ?” ಎಂದು ಅಬ್ರಹಾಮನು ಮನಸ್ಸಿನಲ್ಲೇ ನೆನೆದು ನಕ್ಕು ದೇವರಿಗೆ,


ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.


ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹುಜನಕ್ಕೆ ಸಂತಸವನ್ನು ತರುವುದು.


ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”


ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು.


ಹನ್ನಳು ಏಲಿಗೆ, “ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ.


ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


ಶಪಿಸಲ್ಪಡಲಿ ‘ನಿನಗೆ ಗಂಡು ಹುಟ್ಟಿದೆ’ ಎಂದು ನನ್ನ ತಂದೆಗೆ ತಿಳಿಸಿದಾತ ! ಕೇವಲ ಸಂತಸವನ್ನು ನನ್ನ ತಂದೆಯಲ್ಲಿ ಉಂಟುಮಾಡಿದಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು