Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:8 - ಕನ್ನಡ ಸತ್ಯವೇದವು C.L. Bible (BSI)

8 ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸಾಕನು ಬೆಳೆದು ಊಟಮಾಡುವಷ್ಟು ದೊಡ್ಡವನಾದನು. ಆಗ ಅಬ್ರಹಾಮನು ಒಂದು ದೊಡ್ಡ ಔತಣವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:8
16 ತಿಳಿವುಗಳ ಹೋಲಿಕೆ  

ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.


ಮಗುವು ಮೊಲೆಬಿಟ್ಟನಂತರ ಗೋಮೆರಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು.


ಎಂದೇ ನನ್ನಾತ್ಮ ಸಮಾಧಾನದಿಂದಿದೆ I ಮೌನದಿಂದಿದೆ ತಾಯ್ಮಡಿಲಾ ಕೂಸಂತೆ I ನೆಮ್ಮದಿಯಿಂದಿದೆ ತಾಯ್ಮಡಿಲಾ ಶಿಶುವಂತೆ II


ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.


ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣಮಾಡಿಸಿದನು.


ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ.


ಆಗ ಲಾಬಾನನು ಊರಿನವರನ್ನೆಲ್ಲ ಕರೆಯಿಸಿ ಔತಣವನ್ನು ಏರ್ಪಡಿಸಿದನು.


ಆಗ ಇಸಾಕನು ಅವರಿಗೆ ಔತಣವನ್ನು ಏರ್ಪಡಿಸಿದನು; ಅವರೆಲ್ಲರು ತಿಂದು ಕುಡಿದರು.


ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.


ಪರ್ಷಿಯ ಮತ್ತು ಮೇದ್ಯ ದೇಶಗಳ ದಂಡನಾಯಕರೂ ಪದಾಧಿಕಾರಿಗಳೂ ಸಂಸ್ಥಾನದ ಅಧಿಕಾರಿಗಳೂ ಅರಸನ ಮುಂದೆ ಉಪಸ್ಥಿತರಿದ್ದರು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಡಿಸಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷ ವಸ್ತ್ರಗಳನ್ನೂ ಕೊಡುತ್ತೇನೆ.


ಸಂಸೋನನ ತಂದೆ ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.


ಅದೂ ಅಲ್ಲದೆ: “ಈಪರಿ ಪೇಳುತ್ತಿದ್ದರಾರು ಅಬ್ರಹಾಮನಿಗೆ? 'ಕುಡಿಸುವಳು ಸಾರಳೂ ಮೊಲೆ ಹಾಲನ್ನು ಮಕ್ಕಳಿಗೆ’? ಹೆತ್ತಿರುವೆ ನೋಡಿ ಮಗನನು ಮುಪ್ಪಿನಲು ಆತನಿಗೆ!”


ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು.


ಅನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು