Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:9 - ಕನ್ನಡ ಸತ್ಯವೇದವು C.L. Bible (BSI)

9 ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಐಗುಪ್ತ್ಯಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ ಮಗನು ನಗುವದನ್ನು ಸಾರಳು ಕಂಡು ಅಬ್ರಹಾಮನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೊದಲು, ಈಜಿಪ್ಟಿನ ಸೇವಕಿಯಾದ ಹಾಗರಳಲ್ಲಿ ಒಬ್ಬ ಮಗನು ಹುಟ್ಟಿದ್ದನು. ಅವನಿಗೂ ಅಬ್ರಹಾಮನು ತಂದೆಯಾಗಿದ್ದನು. ಆದರೆ ಆ ಮೊದಲನೆ ಮಗನು ಇಸಾಕನಿಗೆ ತೊಂದರೆ ಕೊಡುವುದನ್ನು ಸಾರಳು ಗಮನಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಜಿಪ್ಟಿನವಳಾದ ಹಾಗರಳಿಗೆ ಅಬ್ರಹಾಮನಿಂದ ಜನಿಸಿದ ಮಗನು ಹಾಸ್ಯ ಮಾಡುವುದನ್ನು ಸಾರಳು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:9
19 ತಿಳಿವುಗಳ ಹೋಲಿಕೆ  

ಹಾಗರಳು ಅಬ್ರಾಮನಿಗೆ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.


ಅಂದು ಪ್ರಕೃತಿಸಹಜವಾಗಿ ಹುಟ್ಟಿದವನು ದೇವರಾತ್ಮದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆ ಇಂದೂ ನಡೆಯುತ್ತದೆ.


ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.


ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಈಜಿಪ್ಟ್ ದೇಶದವಳಾದ ಹಾಗರಳೆಂಬ ಒಬ್ಬ ದಾಸಿ ಇದ್ದಳು.


ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.


ಹುಡುಗನಾದರೂ ನಡತೆಯಲ್ಲೇ ತೋರ್ಪಡಿಸಿಕೊಳ್ಳುವನು ತನ್ನ ಗುಣ ಶುದ್ಧವೋ, ಸತ್ಯವೋ ಎಂಬುದನ್ನು.


“ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ದೂತರು ಎಫ್ರಯಿಮ್, ಮನಸ್ಸೆ, ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಆದರೆ ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.


“ಈಗಲಾದರೊ ನನಗಿಂತ ಚಿಕ್ಕವರು ನನ್ನನ್ನು ಪರಿಹಾಸ್ಯಮಾಡುತ್ತಾರೆ. ಇವರ ಹೆತ್ತವರು ನನ್ನ ಮುಂದೆ. ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆ.


ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು.


ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು