Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:1 - ಕನ್ನಡ ಸತ್ಯವೇದವು C.L. Bible (BSI)

1 ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:1
24 ತಿಳಿವುಗಳ ಹೋಲಿಕೆ  

ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ನಮ್ಮ ಪಿತಾಮಹ ಅಬ್ರಹಾಮನು ದೇವರೊಂದಿಗೆ ಸತ್ಸಂಬಂಧವನ್ನು ಪಡೆದುದ್ದಾದರೂ ಹೇಗೆ? ತನ್ನ ಮಗ ಇಸಾಕನನ್ನು ದೇವರಿಗೆ ಬಲಿಯಾಗಿ ಸಮರ್ಪಿಸಿದ ಸತ್ಕ್ರಿಯೆಯಿಂದಲ್ಲವೇ? ವಿಶ್ವಾಸವು ಸತ್ಕ್ರಿಯೆಗಳಿಂದ ಸಚೇತನಗೊಂಡಿತು.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು, ಸರ್ವೇಶ್ವರ ಸ್ವಾಮಿ ಕಂಡರು. ಪೊದೆಯೊಳಗಿಂದ, “ಮೋಶೇ, ಮೋಶೇ,” ಎಂದು ದೇವರು ಕರೆದರು. ಅದಕ್ಕವನು, “ಇಗೋ, ಇದ್ದೇನೆ,” ಎಂದು ಉತ್ತರಕೊಟ್ಟನು.


ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.


ಹೋಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, “ಅಪ್ಪಾ” ಎಂದು ಕರೆದ; “ಏನು ಮಗನೇ?” ಎಂದ ಅಬ್ರಹಾಮ. ಇಸಾಕನು, “ಬೆಂಕಿ-ಕಟ್ಟಿಗೆಯೇನೋ ಇದೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದ.


ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.


ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ಆಗ ಸರ್ವೇಶ್ವರ, “ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ.


ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ಇವರು ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಸರ್ವೇಶ್ವರನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮುಖಾಂತರವೇ ಪರೀಕ್ಷಿಸುವೆನು,” ಎಂದುಕೊಂಡರು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಈ ಮಾತನ್ನು ಕೇಳಿ ಅಬ್ರಹಾಮನಿಗೆ ಬಹು ದುಃಖವಾಯಿತು. ಕಾರಣ - ಆ ದಾಸಿಯ ಮಗನೂ ಅವನ ಸ್ವಂತ ಮಗನಾಗಿದ್ದನು.


ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು


ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, "ಇಗೋ, ಸಿದ್ಧನಿದ್ದೇನೆ,” ಎಂದನು.


ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು