Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:15 - ಕನ್ನಡ ಸತ್ಯವೇದವು C.L. Bible (BSI)

15 “ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿಯೇ ಒದಗಿಸುತ್ತಾರೆ” ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನ ದೂತನು ಆಕಾಶದಿಂದ ಅಬ್ರಹಾಮನನ್ನು ಎರಡನೆ ಸಲ ಕರೆದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:15
15 ತಿಳಿವುಗಳ ಹೋಲಿಕೆ  

ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.


ಅದೂ ಅಲ್ಲದೆ ಸ್ವಾಮಿಯ ದೂತನು, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ದೊಡ್ಡದಾಗಿಸುವೆನು”, ಎಂದು ಹೇಳಿ ಇಂತೆಂದನು:


ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


“ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;


ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.


ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು.


ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ಬಳಿಕ ದೇವದೂತನು ಯೆಹೋಶುವನಿಗೆ ಈ ಆಶ್ವಾಸನೆಯನ್ನು ಕೊಟ್ಟನು:


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


“ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು.


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.


ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲುಗಳನ್ನಿಟ್ಟು ನಿಂತಿದ್ದ ದೇವದೂತನು ತನ್ನ ಬಲಗೈಯನ್ನು ಸ್ವರ್ಗದ ಕಡೆಗೆ ಎತ್ತಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು