Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:2
18 ತಿಳಿವುಗಳ ಹೋಲಿಕೆ  

ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


“ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ಸೊಲೊಮೋನನು ಜೆರುಸಲೇಮ್ ಪಟ್ಟಣದಲ್ಲಿ ತನ್ನ ತಂದೆ ದಾವೀದನಿಗೆ ದೇವದರ್ಶನ ಉಂಟಾದ ಮೋರೀಯಾ ಗುಡ್ಡದಲ್ಲಿ, ಸರ್ವೇಶ್ವರನ ಆಲಯವನ್ನು ಕಟ್ಟಿಸ ತೊಡಗಿದನು. ಈ ಮೊದಲು, ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು, ದಾವೀದನು ಇದಕ್ಕಾಗಿ ಸಿದ್ಧಮಾಡಿದ್ದನು.


ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.


ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.


ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ?


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.


ತನ್ನಿಂದ ಸಾರಳಲ್ಲಿ ಹುಟ್ಟಿದ ಆ ಮಗನಿಗೆ ಅಬ್ರಹಾಮನು ‘ಇಸಾಕ್’ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು