Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:21 - ಕನ್ನಡ ಸತ್ಯವೇದವು C.L. Bible (BSI)

21 ಅವರುಗಳ ಹೆಸರು ಇವು - ಚೊಚ್ಚಲವಾದ ಊಚ್, ಇವನ ತಮ್ಮ ಬೂಚ್, (ಆರಾಮನ ತಂದೆಯಾದ) ಕೆಮೂವೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಯಾರಾರಂದರೆ - ಅವನ ಚೊಚ್ಚಲನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲ್, ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬಿವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೊದಲನೆ ಮಗನ ಹೆಸರು ಊಚ್; ಎರಡನೆ ಮಗನ ಹೆಸರು ಬೂಚ್; ಮೂರನೆ ಮಗನ ಹೆಸರು ಕೆಮೂವೇಲ್. ಇವನು ಅರಾಮನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ಯಾರೆಂದರೆ, ಅವನ ಚೊಚ್ಚಲು ಮಗ ಊಚ್, ಅವನ ಸಹೋದರ ಬೂಜ್, ಅರಾಮನ ತಂದೆ ಕೆಮೂಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:21
9 ತಿಳಿವುಗಳ ಹೋಲಿಕೆ  

‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು.


“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ಕೆಲವು ಕಾಲವಾದ ಮೇಲೆ ಅಬ್ರಹಾಮನಿಗೆ ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಿಂದ ಮಕ್ಕಳಾದುವೆಂಬ ಸಮಾಚಾರ ಮುಟ್ಟಿತು.


ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್ ಮತ್ತು ಬೆತೂವೇಲ್.


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;


ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು