Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:23 - ಕನ್ನಡ ಸತ್ಯವೇದವು C.L. Bible (BSI)

23 ಬೆತೂವೇಲನು ರೆಬೆಕ್ಕಳ ತಂದೆ. ಈ ಎಂಟುಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈ ಎಂಟು ಮಂದಿಯನ್ನು ವಿುಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬೆತೂವೇಲನು ರೆಬೆಕ್ಕಳ ತಂದೆ. ಮಿಲ್ಕಳು ಈ ಎಂಟು ಮಕ್ಕಳ ತಾಯಿ; ನಾಹೋರನು ಅವರ ತಂದೆ. ನಾಹೋರನು ಅಬ್ರಹಾಮನ ಸಹೋದರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬೆತೂಯೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಾಳು ಅಬ್ರಹಾಮನ ಸಹೋದರ ನಾಹೋರನಿಗೆ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:23
13 ತಿಳಿವುಗಳ ಹೋಲಿಕೆ  

ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.


ಅಷ್ಟುಮಾತ್ರವಲ್ಲ, ನಮ್ಮ ಮೂಲಪಿತ ಇಸಾಕನಿಂದ ರೆಬೆಕ್ಕಳಿಗೆ ಅವಳಿಜವಳಿ ಮಕ್ಕಳಾದರು.


ಯಕೋಬನು ಮೆಸಪೊಟೇಮಿಯಗೆ ಹೊರಟು, ಅರಾಮ್ಯನಾದ ಬೆತೂವೇಲನ ಮಗನೂ ಮತ್ತು ಯಕೋಬ ಹಾಗು ಏಸಾವನಿಗೆ ತಾಯಿಯಾದ ರೆಬೆಕ್ಕಳಿಗೆ ಅಣ್ಣನೂ ಆಗಿದ್ದ ಲಾಬಾನನ ಬಳಿಗೆ ಹೋದನು.


ಮೆಸಪೊಟೇಮಿಯಾ ನಾಡಿನಲ್ಲಿರುವ ನಿನ್ನ ತಾತ ಬೆತೂವೇಲನ ಮನೆಗೆ ಹೊರಟುಹೋಗು. ಅಲ್ಲಿ ನಿನ್ನ ಸೋದರಮಾವನಾದ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊ,” ಎಂದು ಅಪ್ಪಣೆ ಮಾಡಿದನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು.


ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.


“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”


ರೆಬೆಕ್ಕಳನ್ನು ಇಗೋ ನಿನ್ನ ವಶಕ್ಕೆ ಒಪ್ಪಿಸುತ್ತಿದ್ದೇವೆ; ಕರೆದುಕೊಂಡು ಹೋಗಬಹುದು. ಸರ್ವೇಶ್ವರ ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಪತ್ನಿ ಆಗಲಿ,” ಎಂದರು.


ನೀನು ಯಾರ ಮಗಳೆಂದು ಕೇಳಿದ್ದಕ್ಕೆ, 'ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. ಅದನ್ನು ಕೇಳಿ ನಾನು ಆಕೆಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ತೊಡಿಸಿ,


ಅದಕ್ಕೆ ಆಕೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು.


ಅಬ್ರಾಮನು ಮತ್ತು ನಾಹೋರನು ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆ ಹಾರಾನನ ಮಗಳು; ಹಾರಾನನು ಮಿಲ್ಕಳಿಗು ಹಾಗೂ ಇಸ್ಕಳಿಗು ತಂದೆ.


ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್ ಮತ್ತು ಬೆತೂವೇಲ್.


ಇದೂ ಅಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬುವರನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು