Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:5 - ಕನ್ನಡ ಸತ್ಯವೇದವು C.L. Bible (BSI)

5 ಅವನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಗೆ ಬರುತ್ತೇವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ತನ್ನ ಸೇವಕರಿಗೆ - ನೀವು ಇಲ್ಲೇ ಕತ್ತೆಯ ಬಳಿಯಲ್ಲಿರ್ರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ತಿರಿಗಿ ಬರುತ್ತೇವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಮೇಲೆ ಅಬ್ರಹಾಮನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯೊಂದಿಗಿರಿ; ನಾನೂ ನನ್ನ ಮಗನೂ ಆ ಸ್ಥಳಕ್ಕೆ ಹೋಗಿ ಆರಾಧಿಸುತ್ತೇವೆ. ಬಳಿಕ ನಾವು ಹಿಂತಿರುಗಿ ನಿಮ್ಮ ಬಳಿಗೆ ಬರುತ್ತೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಬ್ರಹಾಮನು ತನ್ನ ಸೇವಕರಿಗೆ, “ಕತ್ತೆಯ ಸಂಗಡ ಇಲ್ಲಿಯೇ ಇರಿ. ನಾನೂ, ಹುಡುಗನೂ ಅಲ್ಲಿಗೆ ಹೋಗಿ, ಆರಾಧನೆ ಮಾಡಿ, ನಿಮ್ಮ ಬಳಿಗೆ ಹಿಂದಿರುಗಿ ಬರುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:5
6 ತಿಳಿವುಗಳ ಹೋಲಿಕೆ  

ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ದೂರದಲ್ಲಿ ಆ ಸ್ಥಳ ಕಾಣಿಸಿತು.


ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು.


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.


ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾನು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೆ ಕಾದುಕೊಂಡಿರಿ, ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲೆ ಇರುವರು. ಇತ್ಯರ್ಥವಾಗಬೇಕಾದ ವಿಷಯವೇನಾದರೂ ಇದ್ದರೆ ಅವರ ಬಳಿ ಹೋಗಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು