Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:6 - ಕನ್ನಡ ಸತ್ಯವೇದವು C.L. Bible (BSI)

6 ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡನಂತರ ಅವರಿಬ್ಬರೂ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಬ್ರಹಾಮನು ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದು ತನ್ನ ಮಗನ ಭುಜದ ಮೇಲೆ ಹೊರಿಸಿದನು. ಅಬ್ರಹಾಮನು ವಿಶೇಷವಾದ ಕತ್ತಿಯನ್ನು ಮತ್ತು ಬೆಂಕಿಯನ್ನು ತೆಗೆದುಕೊಂಡನು. ಅವರಿಬ್ಬರೂ ಆರಾಧಿಸುವುದಕ್ಕಾಗಿ ಆ ಸ್ಥಳಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಬ್ರಹಾಮನು ದಹನಬಲಿಗಳ ಕಟ್ಟಿಗೆಗಳನ್ನು ತೆಗೆದುಕೊಂಡು, ತನ್ನ ಮಗ ಇಸಾಕನ ಮೇಲೆ ಹೊರಿಸಿ; ಬೆಂಕಿಯನ್ನೂ, ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡನು. ಅವರಿಬ್ಬರೂ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:6
7 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಅವನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಗೆ ಬರುತ್ತೇವೆ,” ಎಂದು ಹೇಳಿದನು.


ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೆಯಿರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿ ಇದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು