Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:10 - ಕನ್ನಡ ಸತ್ಯವೇದವು C.L. Bible (BSI)

10 ಸದ್ಯಕ್ಕೆ ಎಫ್ರೋನನೇ ಅಲ್ಲಿ ಆ ಹಿತ್ತಿಯರ ನಡುವೆ ಕುಳಿತಿದ್ದನು. ಅವನೂ ಒಬ್ಬ ಹಿತ್ತಿಯನಾಗಿದ್ದನು. ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಅವನು ಅಬ್ರಹಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಷ್ಟರಲ್ಲಿ ಎಫ್ರೋನನೇ ಅಲ್ಲಿ ಹಿತ್ತಿಯರ ನಡುವೆ ಕೂತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಫೋನನು ಪಟ್ಟಣದ ಬಾಗಿಲ ಬಳಿಯಲ್ಲಿ ಹಿತ್ತಿಯರೊಂದಿಗೆ ಕುಳಿತುಕೊಂಡಿದ್ದನು. ಕೂಡಲೇ ಅವನು ಅಬ್ರಹಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅವರ ಮಧ್ಯದಲ್ಲಿ ಕುಳಿತುಕೊಂಡಿದ್ದ ಹಿತ್ತಿಯನಾದ ಎಫ್ರೋನನು ಪಟ್ಟಣದ ದ್ವಾರದ ಬಳಿಯಲ್ಲಿ ಕೂತಿದ್ದ ಎಲ್ಲಾ ಹಿತ್ತಿಯರು ಕೇಳುವಂತೆ ಅಬ್ರಹಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:10
11 ತಿಳಿವುಗಳ ಹೋಲಿಕೆ  

ಹಮೋರನ ಮತ್ತು ಅವನ ಮಗ ಶೆಕೆಮನ ಈ ಮಾತಿಗೆ ಊರಿನವರೆಲ್ಲರು ಸಮ್ಮತಿಸಿದರು. ಅಂತೆಯೇ ಅವರಲ್ಲಿದ್ದ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡರು.


ಎಂತಲೆ ಹಮೋರನು ಮತ್ತು ಅವನ ಮಗ ಶೆಕೆಮನು ಊರಬಾಗಿಲಿಗೆ ಬಂದರು. ಊರಿನವರನ್ನೆಲ್ಲಾ ಸಂಬೋಧಿಸುತ್ತಾ, ಹೀಗೆಂದರು:


ಅಬ್ರಹಾಮನಿಗೆ ಸ್ವಂತವೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆಯೇ ತೀರ್ಮಾನವಾಯಿತು.


ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.


ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.


ನಾನು ಊರ ಮುಂದಿನ ಚಾವಡಿಗೆ ಹೋದಾಗ ಚೌಕದ ಪೀಠದಲ್ಲಿ ಕುಳಿತುಕೊಂಡಾಗ,


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು