Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:11 - ಕನ್ನಡ ಸತ್ಯವೇದವು C.L. Bible (BSI)

11 “ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಾಗಲ್ಲ ಸ್ವಾಮೀ, ನನ್ನ ಮಾತನ್ನು ಲಾಲಿಸು. ಆ ಭೂವಿುಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ಸುಮ್ಮನೆ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ತೀರಿಹೋದ ನಿನ್ನ ಪತ್ನಿಗೆ ಅದರಲ್ಲಿ ಸಮಾಧಿಮಾಡಬಹುದು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಒಡೆಯನೇ ಹಾಗಲ್ಲ, ನನ್ನ ಮಾತನ್ನು ಕೇಳು. ಆ ಹೊಲವನ್ನು ನಿನಗೆ ಕೊಡುತ್ತೇನೆ. ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ. ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ. ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:11
15 ತಿಳಿವುಗಳ ಹೋಲಿಕೆ  

ಪರಿಚಾರಕರಿಗೆ, ‘ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು ಹತ್ತು ನಾಣ್ಯಗಳುಳ್ಳವನಿಗೆ ಕೊಡಿ,’ ಎಂದ.


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ಆಗ ಬೋವಜನು ಊರಿನ ಹಿರಿಯರೆಲ್ಲರಿಗೆ ಹಾಗು ಅಲ್ಲಿ ನೆರೆದಿದ್ದ ಜನರಿಗೆ, “ಎಲಿಮೆಲೆಕನಿಗೆ ಮತ್ತು ಕಲ್ಯೋನ್, ಮಹ್ಲೋನ್ ಇವರಿಗೆ ಸೇರಿದ್ದ ಆಸ್ತಿ ಎಲ್ಲವನ್ನೂ ನವೊಮಿಯಿಂದ ನಾನು ಕೊಂಡುಕೊಂಡಿದ್ದೇನೆ. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು.


ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಹಿರಿಯರ ಮುಂದೆ ಕೊಂಡುಕೊಳ್ಳುವ ಹಕ್ಕು ಮೊದಲು ನಿನಗೆ, ಅನಂತರ ನನಗೆ ಸೇರಿದ್ದು; ಬೇರೆಯವರಿಗಲ್ಲ,” ಎಂದನು. ಆಗ ಆ ವ್ಯಕ್ತಿ: “ನಾನೇ ಕೊಂಡುಕೊಳ್ಳುತ್ತೇನೆ,” ಎಂದು ಹೇಳಿದನು.


ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.


“ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಒಬ್ಬನೇ ಒಬ್ಬ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


“ಒಬ್ಬನು ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆ ವಿಧಿಸಬೇಕು. ಒಬ್ಬನೇ ಒಬ್ಬ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.


ಅಬ್ರಹಾಮನಿಗೆ ಸ್ವಂತವೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆಯೇ ತೀರ್ಮಾನವಾಯಿತು.


ಅಬ್ರಹಾಮನು ಆ ನಾಡಿಗರಿಗೆ ಬಾಗಿ ವಂದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು