ಆದಿಕಾಂಡ 23:13 - ಕನ್ನಡ ಸತ್ಯವೇದವು C.L. Bible (BSI)13 ಅವರೆಲ್ಲರ ಮುಂದೆ ಎಫ್ರೋನನನ್ನು ಉದ್ದೇಶಿಸಿ, “ಕೊಡಲು ಇಷ್ಟವಿದ್ದರೆ ದಯವಿಟ್ಟು ನಾನು ಅರಿಕೆ ಮಾಡುವುದನ್ನು ಕೇಳು; ಆ ಜಮೀನಿಗೆ ಕ್ರಯ ಕೊಡುತ್ತೇನೆ; ಆ ಕ್ರಯವನ್ನು ತೆಗೆದುಕೊಳ್ಳಲು ಸಮ್ಮತಿಸಿದರೆ ನನ್ನ ಪತ್ನಿಯನ್ನು ಅಲ್ಲಿ ಸಮಾಧಿ ಮಾಡುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವದನ್ನು ಕೇಳು; ಆ ಭೂವಿುಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿಮಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇಶದ ಜನರು ಕೇಳುವಂತೆ ಎಫ್ರೋನನಿಗೆ, “ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು. ನಾನು ಹೊಲದ ಕ್ರಯವನ್ನು ಕೊಡುತ್ತೇನೆ. ಅದನ್ನು ನನ್ನಿಂದ ತೆಗೆದುಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಳಿಡುವೆನು,” ಎಂದನು. ಅಧ್ಯಾಯವನ್ನು ನೋಡಿ |