Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:16 - ಕನ್ನಡ ಸತ್ಯವೇದವು C.L. Bible (BSI)

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ರೂಪಾಯಿಗಳನ್ನು ಅಬ್ರಹಾಮನು ಸಾಹುಕಾರರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:16
18 ತಿಳಿವುಗಳ ಹೋಲಿಕೆ  

ಅನಂತರ ನಾನು ಅವರಿಗೆ, “ನಿಮಗೆ ಸರಿದೋರಿದರೆ ನನಗೆ ಸಂಬಳವನ್ನು ಕೊಡಿ; ಇಲ್ಲವಾದರೆ ಬಿಡಿ,” ಎಂದೆ. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ಮೂವತ್ತು ಬೆಳ್ಳಿನಾಣ್ಯವನ್ನು ನನಗೆ ಸಂಬಳಕ್ಕಾಗಿ ಕೊಟ್ಟರು.


ನನ್ನ ಚಿಕ್ಕಪ್ಪನ ಮಗ ಹನಮೇಲನಿಂದ ಅನಾತೋತಿನಲ್ಲಿರುವ ಆ ಹೊಲವನ್ನು ಕೊಂಡುಕೊಂಡೆ. ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.


“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”


ಒಂದು ಶೇಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.


ಚೊಕ್ಕ ಬಂಗಾರಕೊಟ್ಟು ಅದನು ಕೊಂಡುಕೊಳ್ಳಲಾಗದು ಅದರ ಬೆಲೆಗೆ ಬೆಳ್ಳಿಯನು ತೂಕಮಾಡಲಾಗದು.


ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್‍ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.


ನಾವು ಹೊರಟುಹೋದ ನಂತರ ಚಾವಡಿಯೊಂದರಲ್ಲಿ ಇಳಿದುಕೊಂಡೆವು. ಅಲ್ಲಿ ನಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿ ಒಬ್ಬನ ಹಣ, ತೂಕ ಕಿಂಚಿತ್ತೂ ಕಡಿಮೆಯಿಲ್ಲದೆ, ಅವನವನ ಚೀಲದಲ್ಲೇ ಇತ್ತು. ಅದನ್ನು ವಾಪಸ್ಸು ತಂದಿದ್ದೇವೆ.


ಅವರ ಅವಶೇಷಗಳನ್ನು ಮರಳಿ ಶೇಕೆಮಿಗೆ ಕೊಂಡೊಯ್ಯಲಾಯಿತು. ಅಲ್ಲಿ ಹಾಮೋರ್ ಎಂಬವನ ಮಕ್ಕಳಿಂದ ಅಬ್ರಹಾಮನು ಕ್ರಯಕ್ಕೆ ಕೊಂಡುಕೊಂಡಿದ್ದ ಸಮಾಧಿಯಲ್ಲಿ ಹೂಳಿದರು.


ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.


ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು.


ಅವನ ತಲೆಗೂದಲು ಬಹುಭಾರವಾಗುತ್ತಿದ್ದುದರಿಂದ ಪ್ರತಿವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ತಲೆಗೂದಲು ಸರಕಾರೀ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗುತ್ತಿತ್ತು.


ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆ.


ಅರಸರು ಅರೌನನಿಗೆ, “ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಸರ್ವೇಶ್ವರನಿಗೆ ಸುಮ್ಮನೆ ಸಿಕ್ಕಿದ್ದನ್ನು ಬಲಿದಾನವಾಗಿ ಅರ್ಪಿಸಲೊಲ್ಲೆನು,” ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ಬೆಳ್ಳಿ ನಾಣ್ಯಕ್ಕೆ ಕೊಂಡುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು