Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:2 - ಕನ್ನಡ ಸತ್ಯವೇದವು C.L. Bible (BSI)

2 ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಷ್ಟು ವರುಷ ಬದುಕಿದ ಮೇಲೆ ಆಕೆ ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಯ ನಿವಿುತ್ತ ಗೋಳಾಡಿ ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವಳು ಕಾನಾನ್ ದೇಶದ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:2
36 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು.


ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಆರೋನನ ಸಂತತಿಯವರಿಗೆ ಕೊಡಲಾದ ಪಟ್ಟಣಗಳು: ಆಶ್ರಯ ನಗರವಾದ ಹೆಬ್ರೋನ್, ಯತ್ತೀರ್ ಹಾಗು ಲಿಬ್ನದ ಪಟ್ಟಣಗಳು, ಎಷ್ಟೆಮೋವ, ಹೀಲೇನ್, ದೆಬೀರ್, ಆಷಾನ್, ಬೇತ್ಷೆಮೆಷ್ ಮತ್ತು ಅವುಗಳ ಫಲವತ್ತಾದ ಪ್ರದೇಶಗಳು.


‘ಕಿರ್ಯತರ್ಬ’ ಎಂದು ಈ ಮುಂದೆ ಹೆಸರುಗೊಂಡಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ದಾಳಿಮಾಡಿ ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಸೋಲಿಸಿದರು.


ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.


ಯೇಸು ಕಣ್ಣೀರಿಟ್ಟರು.


ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು.


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


“ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.


ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದ ಕುಲ ಒಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು; ಜೆರುಸಲೇಮಿನಲ್ಲಿದ್ದುಕೊಂಡು ಯೆಹೂದ್ಯರನ್ನು ಹಾಗು ಇಸ್ರಯೇಲರನ್ನು ಆಳಿದ್ದು ಮೂವತ್ತಮೂರು ವರ್ಷ.


ಹೆಬ್ರೋನಿನಲ್ಲಿದ್ದ ಅರಸ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಯೇಲರ ಹಿರಿಯರೊಡನೆ ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದರು.


ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿ ಏಳು ವರ್ಷ ಆರು ತಿಂಗಳು ರಾಜ್ಯವಾಳಿದನು.


ದಾವೀದನು ಸೌಲ-ಯೋನಾತಾನರ ಮೇಲೆ ಒಂದು ಶೋಕಗೀತೆಯನ್ನು ರಚಿಸಿದನು.


ದಾವೀದನೂ ಅವನ ಜನರೂ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿದರು. ಸಾಯಂಕಾಲದವರೆಗೆ ಉಪವಾಸಮಾಡಿದರು.


ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು.


ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು.


ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.


ಅದನ್ನು ಹಾಗು ಅದಕ್ಕೆ ಸೇರಿದ ಊರುಗಳನ್ನು ಹಿಡಿದುಕೊಂಡರು. ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ನಾಶಮಾಡಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.


ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು.


ಆರೋನನು ಸತ್ತುಹೋದುದನ್ನು ಇಸ್ರಯೇಲ್ ಸಮಾಜದವರೆಲ್ಲರೂ ತಿಳಿದು ಅವನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದರು.


ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)


ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.


ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.


ಸಾರಳು ನೂರಿಪ್ಪತ್ತೇಳು ವರುಷ ಬದುಕಿದ್ದಳು.


ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.


ಯಕೋಬನು ತನ್ನ ತಂದೆ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿದುದು. ಅದೇ ಅಬ್ರಹಾಮ್ ಹಾಗು ಇಸಾಕನು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, "ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.


ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು.


ಇವುಗಳಲ್ಲಿ ಯೆಹೂದ ಮಲೆನಾಡಿನ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬ ಎಂದರೆ ಅನಾಕನ ತಂದೆಯಾದ ಅರ್ಬನನಗರ).


ಹೊಲಗದ್ದೆಗಳಿದ್ದವರು ವಾಸಿಸುತ್ತಿದ್ದ ಊರುಗಳು - ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್, ಇವುಗಳೂ ಇವುಗಳ ಗ್ರಾಮಗಳೂ;


ಆಗ ಜೋಸೆಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಕಣ್ಣೀರು ಇಡುತ್ತಾ, ಅವರಿಗೆ ಮುದ್ದಿಟ್ಟನು.


ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು