Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:8 - ಕನ್ನಡ ಸತ್ಯವೇದವು C.L. Bible (BSI)

8 ಅವರೊಡನೆ ಮಾತನ್ನು ಮುಂದುವರಿಸುತ್ತಾ ಅವನು, “ನನ್ನ ಪತ್ನಿಯ ಶವವನ್ನು ಇಲ್ಲಿ ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾದರೆ ನನ್ನ ವಿಜ್ಞಾಪನೆ ಇದು: ನೀವು ಜೋಹರನ ಮಗನಾದ ಎಫ್ರೋನನ ಸಂಗಡ ನನ್ನ ಪರವಾಗಿ ಮಾತಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವದು ನಿಮಗೆ ಒಪ್ಪಿಗೆಯಾಗಿದ್ದರೆ ಒಂದು ವಿಜ್ಞಾಪನೆಯುಂಟು. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರಿಗೆ, “ತೀರಿಹೋದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನೀವು ನಿಜವಾಗಿಯೂ ಸಹಾಯ ಮಾಡಬೇಕೆಂದಿದ್ದರೆ, ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ಸಂಗಡ ಮಾತನಾಡಿ, “ನಾನು ನನ್ನ ಹೆಂಡತಿಯ ಶವವನ್ನು ಹೂಳಿಡುವುದು ನಿಮ್ಮ ಮನಸ್ಸಿಗೆ ಸರಿಬಿದ್ದರೆ, ನನ್ನ ಮಾತು ಕೇಳಿ ಚೋಹರನ ಮಗ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:8
7 ತಿಳಿವುಗಳ ಹೋಲಿಕೆ  

ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸ ಸೊಲೊಮೋನನಿಗೆ ಹೇಳಿ; ಅವನು ನಿಮ್ಮ ಮಾತನ್ನು ತಳ್ಳುವುದಿಲ್ಲ,” ಎಂದನು.


ಅವನ ಮಕ್ಕಳಾದ ಇಸಾಕ್ - ಇಷ್ಮಾಯೇಲರು ಅವನನ್ನು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿದ್ದ ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.


ಅಬ್ರಹಾಮನು ಎದ್ದುನಿಂತು ಆ ಹಿತ್ತಿಯ ನಾಡಿಗರಿಗೆ ಬಾಗಿ ನಮಸ್ಕರಿಸಿದನು.


ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು