Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:1 - ಕನ್ನಡ ಸತ್ಯವೇದವು C.L. Bible (BSI)

1 ಅಬ್ರಹಾಮನು ಆಗ ತುಂಬು ವಯಸ್ಸಿನ ಮುದುಕ. ಸರ್ವೇಶ್ವರ ಸ್ವಾಮಿ ಅವನ ಎಲ್ಲ ಕೆಲಸಕಾರ್ಯಗಳನ್ನು ಆಶೀರ್ವದಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಬ್ರಹಾಮನು ಬಹುದಿನದ ವೃದ್ಧನಾದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬ್ರಹಾಮನು ಬಹಳ ವೃದ್ಧನಾದನು. ಯೆಹೋವನು ಅಬ್ರಹಾಮನನ್ನೂ ಅವನು ಮಾಡಿದ ಪ್ರತಿಯೊಂದನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ರಹಾಮನು ವೃದ್ಧನಾಗಿದ್ದನು. ಯೆಹೋವ ದೇವರು ಅಬ್ರಹಾಮನನ್ನು ಎಲ್ಲಾದರಲ್ಲಿಯೂ ಆಶೀರ್ವದಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:1
17 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.


ಅಬ್ರಹಾಮನು ಮತ್ತು ಸಾರಳು ಬಹು ವೃದ್ಧರಾಗಿದ್ದರು; ಸಾರಳಿಗೆ ಮುಟ್ಟುನಿಂತುಹೋಗಿತ್ತು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.


ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಹೀಗಾಯಿತು ನಿನ್ನ ತ0ದೆಯ‍‍ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು.


ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.


ಇಸಾಕನು ಹುಟ್ಟಿದಾಗ ಅಬ್ರಹಾಮನಿಗೆ ನೂರು ವರ್ಷವಾಗಿತ್ತು.


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು