ಆದಿಕಾಂಡ 24:10 - ಕನ್ನಡ ಸತ್ಯವೇದವು C.L. Bible (BSI)10 ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ ದಣಿಯ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಗೆ ಬಂದು ನಾಹೋರನು ವಾಸಿಸಿದ ಊರನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನೂ, ತನ್ನ ಯಜಮಾನನಿಂದ ಎಲ್ಲಾ ತರಹದ ವಸ್ತ್ರಗಳನ್ನೂ ತೆಗೆದುಕೊಂಡು ಅರಾಮ್ ನಹರೈಮಿಗೆ ಹೊರಟು, ನಾಹೋರನು ವಾಸವಾಗಿದ್ದ ಊರನ್ನು ಸೇರಿದನು. ಅಧ್ಯಾಯವನ್ನು ನೋಡಿ |