Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:12 - ಕನ್ನಡ ಸತ್ಯವೇದವು C.L. Bible (BSI)

12 “ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಅನುಕೂಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಬೇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:12
29 ತಿಳಿವುಗಳ ಹೋಲಿಕೆ  

“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.


“ನಾನು ಇಂದು ಈ ಊರಿನ ಬುಗ್ಗೆಯ ಬಳಿಗೆ ಬಂದೆ. ‘ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ. ನೀವು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾದರೆ


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II


ರಕ್ಷಿಸು ಪ್ರಭೂ, ರಕ್ಷಿಸು ದಯವಿಟ್ಟು I ಸುಕ್ಷೇಮ ನೀಡು ಪ್ರಭು ಕರುಣೆಯಿಟ್ಟು II


ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II


ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಇಸಾಕನು, “ಏನು ಮಗನೇ, ಇಷ್ಟು ಬೇಗನೆ ಬೇಟೆ ಹೇಗೆ ಸಿಕ್ಕಿತು?” ಎಂದು ಕೇಳಿದನು. ಯಕೋಬನು, “ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನನ್ನೆದುರಿಗೆ ಬರಮಾಡಿದರು,” ಎಂದನು.


ನೀನು ಅದನ್ನು ಅವರ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹಾಗೆ ಮಾಡಿದರೆ ಅವರು ಸಾಯುವುದಕ್ಕೆ ಮುಂಚೆ ನಿನ್ನನ್ನೇ ಮನಸಾರೆ ಆಶೀರ್ವದಿಸುವರು,” ಎಂದಳು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಆ ಮನುಷ್ಯ, ತನ್ನ ಪ್ರಯಾಣವನ್ನು ಸರ್ವೇಶ್ವರ ಸಫಲಗೊಳಿಸಿದರೋ ಇಲ್ಲವೋ ಎಂದು ಯೋಚಿಸುತ್ತಾ ಏನೂ ಮಾತಾಡದೆ ಆಕೆಯನ್ನೇ ದೃಷ್ಟಿಸಿ ನೋಡುತ್ತಿದ್ದನು.


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು